ರಸ್ತೆ ಅಪಘಾತ: ಉಡುಪಿ ನಗರಸಭೆಯ ವ್ಯವಸ್ಥಾಪಕ ಮೃತ್ಯು

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ವೆಂಕಟರಮಣ ಎಂಬವರು ಚಿಕಿತ್ಸೆ ಫಲಕಾರಿಯಾಗದೆ‌ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಭಾನುವಾರ ಕುಂಜಿಬೆಟ್ಟು ಮುಖ್ಯರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಎಡವಿ ರಸ್ತೆಗೆಬಿದ್ದಿದ್ದರು. ಈ ಸಂದರ್ಭದಲ್ಲಿ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ವೆಂಕಟರಮಣ ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಸೋಮವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ,ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.