ಮಂಗಳೂರು: ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ನ.21ರಂದು ನಡೆದ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಮಧ್ಯಪ್ರದೇಶದ ಮೂಲದ ಜಯ ಸಿಂಗ್ (21)ಮುನೀಮ್ ಸಿಂಗ್(20) , ಮನೀಶ್ ತಿರ್ಕಿ(33 ) ಮತ್ತು ಝಾರ್ಖಂಡ್ ಮೂಲದ ಮುಖೇಶ್ ಸಿಂಗ್ (20) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಇವರೆಲ್ಲ ಸ್ನೇಹಿತರಾಗಿದ್ದಾರೆ.
ಆರೋಪಿಗಳು ನ.21ರಂದು ಮಧ್ಯಾಹ್ನ ಫ್ಯಾಕ್ಟರಿಯ ಕಂಪೌಂಡ್ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಬಲವಂತದಿಂದ ಎತ್ತಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಕತ್ತು ಹಿಸುಕಿ ಕೊಲೆಗೈದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.