ಮಣಿಪಾಲ: ಗೋಕಳ್ಳರು ವಾಹನ ಹರಿಸಿದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗೋರಕ್ಷಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದರು.
ಬಳಿಕ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದರು.
ಏನಿದು ಪ್ರಕರಣ?:
ಮಂಗಳವಾರ ತೀರ್ಥಹಳ್ಳಿಯ ಮೇಳೆಗೆ ಸಮೀಪ ಕೂಳೂರು ಮಾರ್ಗದಲ್ಲಿ ಗೋಕಳ್ಳರು, ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದರು. ಇದನ್ನು ತಡೆಯಲು ಬಂದ ಕಿರಣ್ (23) ಮತ್ತು ಚರಣ್ (24) ಎಂಬ ಸಹೋದರರ ಮೇಲೆ ಗೋಕಳ್ಳರು ಪಿಕ್ ಅಪ್ ವ್ಯಾನ್ ಹತ್ತಿಸಿದದ್ದರು. ಇದರಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು.












