ಭಾರತಕ್ಕೂ ಕಾಲಿಟ್ಟ ಓಮೈಕ್ರಾನ್‌ ವೈರಸ್; ಕರ್ನಾಟಕದ ಇಬ್ಬರಲ್ಲಿ ಪತ್ತೆ

ಬೆಂಗಳೂರು: ಕೋವಿಡ್ ರೂಪಾಂತರಿ ತಳಿಯಾದ ಓಮೈಕ್ರಾನ್‌ ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕ ರಾಜ್ಯದ ಇಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇಬ್ಬರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತು. ಆದರೆ, ವೈರಸ್ ಬಗ್ಗೆ ಗೊಂದಲ ಇತ್ತು. ಐಸಿಎಂಆರ್‌ನಲ್ಲಿ ತಪಾಸಣೆ ಮಾಡಿದಾಗ ಅದು ಕೊರೊನಾವೈರಸ್‌ನ ಹೊಸ ರೂಪಾಂತರವಾದ ಓಮೈಕ್ರಾನ್ ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

66 ವರ್ಷದ ಒಬ್ಬ ವೃದ್ದನಲ್ಲಿ ಹಾಗೂ 44 ವರ್ಷದ ವ್ಯಕ್ತಿಯಲ್ಲಿ ಓಮೈಕ್ರಾನ್ ಇರುವುದು ಪತ್ತೆಯಾಗಿದೆ. ಈ ಇಬ್ಬರೂ ಕರ್ನಾಟಕದವರು ಎಂಬುದು ತಿಳಿದು ಬಂದಿದೆ.