ನವದೆಹಲಿ: ಜಗತ್ತಿನಾದ್ಯಂತ ಆತಂಕ ಮೂಡಿಸಿರುವ ಓಮೈಕ್ರಾನ್ ತಳಿ ಇದೀಗ ಭಾರತದಲ್ಲೂ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಇಬ್ಬರಿಗೆ ಓಮೈಕ್ರಾನ್ ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.
ಸೋಂಕು ಪತ್ತೆಯಾದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರವಾಲ್, ಈ ವೈರಾಣುವಿನ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಓಮೈಕ್ರಾನ್ ಅಪಾಯಕಾರಿ ಹೌದೋ? ಅಲ್ಲವೋ? ಎಂಬುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ವ್ಯಾಪಕ ಸಂಶೋಧನೆಗಳು ನಡೆಯುತ್ತಿವೆ. ಭಾರತದಲ್ಲಿ ಜನರು ಹೆದರಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಇದುವರೆಗೆ 29 ದೇಶಗಳಲ್ಲಿ 323 ಜನರಲ್ಲಿ ಓಮೈಕ್ರಾನ್ ಇರುವುದು ದೃಢಪಟ್ಟಿದೆ. ಇದರ ಸೋಂಕು ಕಂಡು ಬಂದವರಲ್ಲಿ ಮೆದು ಲಕ್ಷಣಗಳಿದ್ದು, ಮಾರಕವಾಗಿ ಯಾರಿಗೂ ಪರಿಣಮಿಸಿಲ್ಲ ಎಂದು ಅಗರವಾಲ್ ತಿಳಿಸಿದ್ದಾರೆ.