ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ

ಬೆಂಗಳೂರು: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಏಕದಿನ ಕ್ರಿಕೆಟ್ ತಂಡಕ್ಕೆ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

ಬುಧವಾರ ಈ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದೆ. ಆ ಮೂಲಕ ರೋಹಿತ್ ಶರ್ಮಾ ಟಿ20 ಮತ್ತು ಏಕದಿನ ತಂಡಗಳ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಈಚೆಗೆ ವಿರಾಟ್ ಕೊಹ್ಲಿ ಅವರು ಭಾರತ ಟಿ20 ತಂಡದ ನಾಯಕತ್ವ ತೊರೆದಿದ್ದರು. ಆದರೆ, ಏಕದಿನ ಕ್ರಿಕೆಟ್ ತಂಡದ ನಾಯಕತ್ವ ಬಿಡುವ ಬಗ್ಗೆ ಇದುವರೆಗೂ ಅವರು ಪ್ರಸ್ತಾಪ ಮಾಡಿರಲಿಲ್ಲ. ಅವರು ಟೆಸ್ಟ್ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ. ಈ ಕುರಿತು  ಆಯ್ಕೆ ಸಮಿತಿಯು ವಿರಾಟ್ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.