ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಕಾಪು ಪುರಸಭೆಯ 23 ವಾರ್ಡುಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ನಿಗಧದಿಪಡಿಸಿ, ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದ್ದು, ಡಿ. 27 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿ. 30 ರಂದು ಬೆಳಿಗ್ಗೆ 8 ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.