ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಸಾವನ್ನು ಸಂಭ್ರಮಿಸುವುದು ಹಾಗೂ ಅವಮಾನಕರ ಪೋಸ್ಟ್ ಪ್ರಕಟಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬೊಮ್ಮಾಯಿ, ಸಿಡಿಎಸ್ ಜನರಲ್ ಬಿಪಿನ್ ರಾವತ್ ಕುರಿತು ಟ್ವಿಟರ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅವಮಾನಕರ ಪೋಸ್ಟ್‌ಗಳನ್ನು ಪ್ರಕಟಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಅಂಥ ಸಂದೇಶಗಳನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಶಿಸ್ತುಕ್ರಮ, ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.