ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕಗಳು , ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿ ಸಿ ಎಲ್ 2021) ಆಯೋಜಿಸಿದೆ.
ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಟ್ರೋಪಿ ಅನಾವರಣ ಮಾಡಿ ಮೊದಲ ಟಾಸ್ ಮಾಡುವುದರ ಮೂಲಕ ಟೂರ್ನ್ ಮೆಂಟ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಹೆಚ್ಚಿನವರಿಗೆ ಆಡಲು ಅವಕಾಶ ಸಿಗಲಿಲ್ಲ. ಈಗ ಇದಕ್ಕೆ ಒಂದು ಅವಕಾಶವನ್ನುಕಸ್ತೂರ್ಬಾ ಆಸ್ಪತ್ರೆ ಮಾಡಿಕೊಟ್ಟಿದೆ. ಮಾಹೆ ಮಣಿಪಾಲವು ಯಾವಾಗಲೂ ಕ್ರೀಡೆ ಮತ್ತು ಚಟುವಟಿಕೆಗಳಿಗೆ ತುಂಬಾ ಬೆಂಬಲ ನೀಡುತ್ತದೆ. ಕೆಲವೇ ಕೆಲವು ವಿಶ್ವವಿದ್ಯಾನಿಲಯಗಳು ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಗಾಗಿ ಭಾರತ ಸರಕಾರದಿಂದ ಗುರುತಿಸಲ್ಪಟ್ಟಿದ್ದು, ಅವುಗಳಲ್ಲಿ ಮಾಹೆ ಮಣಿಪಾಲವು ಸಹ ಒಂದಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಉಪ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ , ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಗಳಾದ -ಡಾ. ಪಿಎಲ್ಎನ್ ಜಿ ರಾವ್ , ಕೆ ಎಂ ಸಿ ಡೀನ್ ಡಾ. ಶರತ್ ಕೆ ರಾವ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಸಿ ಒ ಒ ಶ್ರೀ ಸಿ ಜಿ ಮುತ್ತಣ್ಣ ಮತ್ತು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ , ಕೆ ಎಂ ಸಿ. ಮಂಗಳೂರಿನ ವೈದ್ಯಕೀಯ ಅಧೀಕ್ಷಕರಾದ ಡಾ. ಆನಂದ್ ವೇಣುಗೋಪಾಲ್ ಉಪಸ್ಥಿತರಿದ್ದರು.