ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ ರಾಜ್ಯ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರ ಅನ್ವಯ ಮೇಲ್ಕಂಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿ. 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ.