ಮಣಿಪಾಲ: ಉಪನ್ಯಾಸಕ ನೇಣಿಗೆ ಶರಣು

ಮಣಿಪಾಲ: ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರೀಹರ್ಷ ಶಾನುಭಾಗ್ (37) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ. ಇವರು ತೀರ್ಥಹಳ್ಳಿ ಸರಕಾರಿ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು, ಅದೇ ಖಿನ್ನತೆಯಲ್ಲಿ ಮನನೊಂದು ಡಿ. 23 ರಂದು ಮನೆಯಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಶಿಲ್ಪಾ ಶಾನುಭಾಗ್ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.