ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಿಂದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ.
ಮೂಡನಿಡಂಬೂರು ಗ್ರಾಮದ
ನಿವಾಸಿ ಸಹನಾ (24) ನಾಪತ್ತೆಯಾಗಿರುವ ಯುವತಿ. ಈಕೆ ಡಿಸೆಂಬರ್ 23 ರಂದು ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿಯಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ: 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.