ನವದೆಹಲಿ: ದೇಶದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದರು.
ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಘೋಷಣೆ ಮಾಡಿದರು. ಇದೇ ವೇಳೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದೂ ಅವರು ಪ್ರಕಟಿಸಿದರು.
ಶಾಲಾ ಕಾಲೇಜಿಗೆ ತೆರಳಿ, 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಲಾಗುವುದು ಎಂದು ತಿಳಿಸಿದರು. ಗಂಭೀರ ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಮುಂಜಾಗ್ರತಾ ಕ್ರಮವಾಗಿ ಈ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ ಎಂದರು.
ಕೊರೊನಾ ರೂಪಾಂತರ ತಳಿ ಓಮೈಕ್ರಾನ್ ಬಗ್ಗೆ ಆತಂಕ ಬೇಡ, ನಿಯಮಾವಳಿಗಳನ್ನು ಪಾಲಿಸಿ ಎಂದು ಅವರು ಜನರಿಗೆ ಕರೆ ನೀಡಿದರು.