ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮದ ದೇವಸ್ಥಾನಬೆಟ್ಟುವಿನ ಚಿತ್ತಾರಿ ಬಳಿ ಹಾಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಹಾವಂಜೆ ಗ್ರಾಮ ಕಂಬಳಿಬೆಟ್ಟು ನಿವಾಸಿ ಸುಧಾಕರ ಪೂಜಾರಿ ಅವರ 29 ವರ್ಷ ಪ್ರಾಯದ ಮಗ ಶರತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಖಿನ್ನತೆಯಲ್ಲಿ ನೇಣಿಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.