ಉಡುಪಿ ಎಕ್ಸ್ ಪ್ರೆಸ್ ಸುದ್ದಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ತಾಲೂಕಿನ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.
ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿʼಸೋಜ ರವರ ಪುತ್ರ ಸಂದೀಪ್ ಅನಿಸಿತ್ ಡಿʼಸೋಜ (15) ನೇಣಿಗೆ ಶರಣಾದ ಬಾಲಕ. ಈತ ಹತ್ತನೇ ತರಗತಿಯಲ್ಲಿ ಕಲಿಯುತಿದ್ದಾನೆ.
ಸಂದೀಪ್ ಜ. 3ರಂದು ರಾತ್ರಿ ಕೋಣೆಯಲ್ಲಿ ಮಲಗಿದ್ದು, ಬೆಳಿಗ್ಗೆ ಮನೆಯವರು ನೋಡುವ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.












