ಉಡುಪಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಉಡುಪಿ ಜಿಲ್ಲೆ, ಗ್ಲೋಬಲ್ ಇನ್ ಸ್ಟಿಟ್ಯೂಟ್ ಫಾರ್ ಎಜುಕೇಶನ್ ಆ್ಯಂಡ್ ರಿಸರ್ಚ್ ಫೌಂಡೇಶನ್ ಹಾಗೂ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘ ಇವರ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದ ಮದರ್ ಪ್ಯಾಲೇಸ್ ಹೋಟೆಲ್ ನ ಮಿನಿ ಹಾಲ್ ನಲ್ಲಿ ಗುರುವಾರ
ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.
ಉಡುಪಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತಾಧಿಕಾರಿ ಡಾ. ಪ್ರೇಮಾನಂದ ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಚೆಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ಗ್ಲೋಬಲ್ ಇನ್ ಸ್ಟಿಟ್ಯೂಟ್ ಫಾರ್ ಎಜುಕೇಶನ್ ಆ್ಯಂಡ್ ರಿಸರ್ಚ್ ಫೌಂಡೇಶನ್ ಮುಖ್ಯಸ್ಥ ಕೆ.ಪಿ. ರಾಮ ಮಾರುತಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಹಾರ ಸುರಕ್ಷತೆ ತರಬೇತುದಾರ ಡಾ. ಎಚ್.ಜೆ. ಶಂಕರಲಿಂಗೇಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ವಿಶ್ವನಾಥ್ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.