ಕೋವಿಡ್‌ ಹಿನ್ನಲೆ: ಅತ್ತೂರು ಸಂತ ಲಾರೆನ್ಸ್‌ ಪುಣ್ಯಕ್ಷೇತ್ರದ ಮಹೋತ್ಸವ ಮುಂದೂಡಿಕೆ

ಉಡುಪಿ: ರಾಜ್ಯದಲ್ಲಿ ಕೋವಿಡ್-19 ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ, ಜನಸಾಮಾನ್ಯರ ಆರೋಗ್ಯ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 2022 ಜನವರಿ 16 ರಿಂದ 27 ರವರೆಗೆ ನೆರವೇರಬೇಕಿದ್ದ ಅತ್ತೂರು-ಕಾರ್ಕಳ ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ನವೇನ ಪ್ರಾರ್ಥನೆ ಹಾಗೂ ಮಹೋತ್ಸವ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ ಎಂದು ಬಸಿಲಿಕಾದ ನಿರ್ದೇಶಕರಾದ ಆಲ್ಬನ್‌ ಡಿʼಸೋಜಾ ತಿಳಿಸಿದ್ದಾರೆ.

 

ಮುಂದೂಡಲ್ಪಟ್ಟ ವಾರ್ಷಿಕ ಮಹೋತ್ಸದ ದಿನಗಳನ್ನು ಸೂಕ್ತ ಸಮಯದಲ್ಲಿ ಭಕ್ತಾದಿಗಳಿಗೆ ತಿಳಿಸಲಾಗುವುದು. ಭಕ್ತಾದಿಗಳು ಮತ್ತು ಸಾರ್ವಜನಿಕರು ಸಹಕರಿಸಬೇಕಾಗಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.