ಉಡುಪಿ: ಸಮಾಜ ವಿಜ್ಞಾನಗಳು ಮೌಲ್ಯಾಧರಿತ ಜ್ಞಾನವನ್ನು ನೀಡುವುದರ ಜೊತೆಗೆ ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಕರಿಸುತ್ತದೆ ಎಂದು ಮುಲ್ಕಿ ವಿಜಯ ಕಾಲೇಜಿನ ಪ್ರಾಂಶುಪಾಲೆ ಡಾ. ಶ್ರೀಮಣಿ ಹೇಳಿದರು.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಮಾಜ ವಿಜ್ಞಾನ ಸಂಘದ 2021-22ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಸಮಾಜದಲ್ಲಿ ಸಮಾಜ ವಿಜ್ನಾನಗಳ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ ಮಾತನಾಡಿ, ಸಮಾಜ ವಿಜ್ಞಾನಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.
ಸಂಘದ ಸಂಯೋಜಕಿ ಶಾಲಿನಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಶಿಲ್ಪ ಹಾಗೂ ಅಮೃತ ಪ್ರಾರ್ಥಿಸಿದರು. ಸವಿತಾ ಸ್ವಾಗತಿಸಿದರು. ಚೈತ್ರ ಕಾರ್ಯಕ್ರಮ ನಿರೂಪಿಸಿದರು. ನಯನಾ ವಂದಿಸಿದರು.