ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಫ್ಯಾಕಲ್ಟಿ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-45 ವರ್ಷದೊಳಗಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ದಾಖಲಾತಿ ಪರಿಶೀಲನೆ
ಹೆಚ್ಚಿನ ಮಾಹಿತಿಗಾಗಿ: https://ksoumysuru.ac.in/












