ಕಾರ್ಕಳ: ಕಾರ್ಕಳ ತಾಲೂಕಿನ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತದೇಹವು ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಮೃತ ವ್ಯಕ್ತಿ. ಇವರ ಮೃತದೇಹವು ಇಂದು ಮುಂಡ್ಲಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ.
ಸ್ಥಳಕ್ಕೆ ವನ್ಯ ಜೀವಿ ವಿಭಾಗದ ಅಧಿಕಾರಿಗಳು ಹಾಗೂ ಅಜೆಕಾರು ಠಾಣೆಯ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.