ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 27 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 0820-2574881, 8050370006 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.