ಕೋಟ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದ ತೆಂಕಬೆಟ್ಟು ಎಂಬಲ್ಲಿ ಫೆ.1ರಂದು ಸಂಜೆ ಬೆಳಕಿಗೆ ಬಂದಿದೆ.
ಉಳ್ತೂರು ತೆಂಕಬೆಟ್ಟು ನಿವಾಸಿ 76 ವರ್ಷದ ಸರೋಜ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ಅಡುಗೆ ಮನೆಯ ಫ್ಯಾನಿಗೆ ಸೀರೆಕಟ್ಟಿ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ಸುಮಾರು ವರ್ಷದಿಂದ ಫಿಡ್ಸ್ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಇದೇ ಖಿನ್ನತೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















