ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಅಂಗವಿಕಲರಿಗಾಗಿ, ಎಸ್.ಎಸ್.ಎಲ್.ಸಿ ಮತ್ತು ನಂತರದ ಪಬ್ಲಿಕ್ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ಮಹಿಳೆಗೆ ಜನಿಸುವ ಮೊದಲ ಮತ್ತು 2 ನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಸಿ ಬ್ಲಾಕ್, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ 0820-2574810 / 811 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.












