ಶಿರ್ವ: ಇಲ್ಲಿನ ಸಂತ ಮೇರಿ ಕಾಲೇಜಿನ ಐಕ್ಯುಎಸಿ ಸಹಯೋಗದೊಂದಿಗೆ ನಡೆದ ಫೋಟೋಗ್ರಾಫಿ ಕ್ಲಬ್ನ ಉದ್ಘಾಟನಾ ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಪರ್ಸ್ ಎಸೋಸಿಯೆಶನ್ ಕಾಪು ವಲಯದ ಅಧ್ಯಕ್ಷರಾದ ವಿನೋದ್ ಕಾಂಚನ್ ಇವರು ನೆರವೇರಿಸಿದರು.
ಫೋಟೋಗ್ರಾಫಿ ಎನ್ನುವುದು ಒಂದು ಸೃಜನಾತ್ಮಕ ಕಲೆ, ಇಂದಿನ ಯುವ ಪೀಡಿಗೆ ಈ ಕಲೆಯನ್ನು ಒಂದು ವ್ಯವಸ್ಥಿತ ರೂಪದಲ್ಲಿ ಕಲಿತು ಬೆಳೆಯಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೋನಿಸ್ ಇವರು ಫೋಟೋಗ್ರಾಫಿ ಕ್ಷೇತ್ರದಲ್ಲಿ ಈಗ ಸಾಕಷ್ಟು ಅವಕಾಶಗಳಿವೆ, ನಮ್ಮ ಕಾಲೇಜಿನಲ್ಲಿಯು ಈ ಕ್ಷೇತ್ರದಲ್ಲಿ ಆಸಕ್ತಿ ಇರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಪ್ರೋತ್ಸಾಹ ನೀಡುತ್ತಿದ್ದು ವಿದ್ಯಾರ್ಥಿಗಳು ಇದನ್ನು ಬಳಸಿಕೊಳ್ಳಬೇಕೆಂದು ಹೇಳಿದರು.
ಫೋಟೋಗ್ರಾಫಿ ಕ್ಲಬ್ನ ಸಂಯೋಜಕರಾದ ಕು.ಪದ್ಮಾಸಿನಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸಂಯೋಜಕರಾದ ಶ್ರೀನಾಥ್ ಇವರು ಸ್ವಾಗತಿಸಿದರು, ಮೆಲ್ವಿನ್ ಮಥಾಯಸ್ ಅತಿಥಿಗಳನ್ನು ಪರಿಚಯಿಸಿದರು, ಲಿಯೊನ್ ಮೆಂಡೊನ್ಸಾ ಕಾರ್ಯಕ್ರಮವನ್ನು ನಿರ್ವಹಿಸಿ ಹರ್ಷಿತಾ ಇವರು ವಂದಿಸಿದರು.
ಕಾರ್ಯಕ್ರಮದಲ್ಲಿ ಎಸ್.ಕೆ.ಪಿ.ಎ. ಕಾಪು ವಲಯದ ಕಾರ್ಯದರ್ಶಿ ಶ್ರೀಯುತ ರಾಜೇಶ್ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ವೀರೇಂದ್ರ ಪೂಜಾರಿ ಉಪಸ್ಥಿತರಿದ್ದರು.