ಉಡುಪಿ: ಸಮವಸ್ತ್ರ ಕಡ್ಡಾಯ ಇಲ್ಲದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಂದೆ ಇದ್ದ ಪದ್ದತಿಯನ್ನು ಮುಂದುವರೆಸಿಕೊಂಡು ಹೋಗಬಹುದು. ಸಮವಸ್ತ್ರ ಕಡ್ಡಾಯ ಇರುವ ಕಾಲೇಜುಗಳಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಉಡುಪಿ ತಾಲೂಕು ಸೌಧದಲ್ಲಿ ಭಾನುವಾರ ನಡೆದ ಶಾಂತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಮವಸ್ತ್ರ ಇಲ್ಲದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಹಾಕಿಕೊಂಡು ಹಿಂದಿನಂತೆ ಬರಬಹುದು. ಕೋರ್ಟ್ ಅದನ್ನು ಹೇಳಿಲ್ಲ. ಎಲ್ಲಿ ಸಮವಸ್ತ್ರ ಇದೆಯೋ ಅಲ್ಲಿ ಹಾಕಿಕೊಂಡು ಬರಲು ಹೇಳಿದೆ ಎಂದರು.
ಸಭೆಯಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಸೌಹಾರ್ದತೆಯಿಂದ ನಡೆಸಿಕೊಂಡು ಹೋಗಬೇಕೆಂಬ ನಿರ್ಣಯ ಆಗಿದೆ ಎಂದು ಹೇಳಿದರು.