ಚಾಮರಾಜನಗರ: ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಹಾಗಾಗಿ, ವಿದ್ಯಾರ್ಥಿಗಳು ಯಾವ ರೀತಿಯ ಬಟ್ಟೆ ಹಾಕಿಕೊಂಡು ಬರುವುದಕ್ಕೆ ಅವಕಾಶ ಇದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದರು.
ಹಿಜಾಬ್- ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.