ರಾಜ್ಯ ಸರ್ಕಾರ ನೋಂದಣಿ ಮತ್ತು ಮುದ್ರಾಂಕ‌ ಇಲಾಖೆ ಕಚೇರಿಯ ಸಮಯ ವಿಸ್ತರಣೆ

ರಾಜ್ಯ ಸರ್ಕಾರವು ಇನ್ನು ಮುಂದೆ ಬೆ.9 ರಿಂದ ಸಂಜೆ 7 ರ ವರೆಗೆ ನೋಂದಣಿ ಮತ್ತು ಮುದ್ರಾಂಕ‌ ಇಲಾಖೆ ಕಚೇರಿಯ ಸಮಯವನ್ನು ವಿಸ್ತರಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ ಎಂದು ನೋಂದಣೆ ಉಪ ಮಹಾ ಪರಿವೀಕ್ಷಕರು ಆದೇಶ ಹೊರಡಿಸಿದ್ದಾರೆ.

ನೋಂದಣಿ ಮತ್ತು ಮುದ್ರಾಂಕ‌ ಇಲಾಖೆಯ ಕಚೇರಿಗಳಲ್ಲಿ ಜನಸಂದಣಿ ಹೆಚ್ಚಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿಯ ಸಮಯವನ್ನು ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಉಪ ನೋಂದಣಿ ಕಚೇರಿ ಕರ್ತವ್ಯದ ಸಮಯ ಪರಿಷ್ಕರಣೆ ಮಾಡಲಾಗಿದ್ದು, ಈ ಸಂಬಂಧ ಎಲ್ಲಾ ಉಪ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.