ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬಂಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.