ಉಡುಪಿ: ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲ್ಪಡುವ 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಫೆಬ್ರವರಿ 19 ರಿಂದ 21ರ ವರೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಲಿದೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರದ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಈ ನಿಷೇಧಾಜ್ಞೆ ಆದೇಶವು ನಿಗದಪಡಿಸಿದ ಪರೀಕ್ಷಾ ಕೇಂದ್ರದಲ್ಲಿ ಫೆ.19ರಿಂದ 21ರ ವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಜಾರಿಯಲ್ಲಿರುತ್ತದೆ.