ಫೆ.22: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ, ಚಿಕಿತ್ಸೆ ಶಿಬಿರ

ಪಡುಬಿದ್ರಿ:  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಹಾಗೂ ಪಡುಬಿದ್ರಿ ಆರೋಗ್ಯ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಚಿಕಿತ್ಸಾ ಶಿಬಿರವು ಫೆ.22 ರಂದು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.

ಫೆ.22 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.