ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ಲಾಸ್ಟಿಕ್ ತಂತ್ರಜ್ಞಾನದ ಕುರಿತು ತರಬೇತಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವಕ ಹಾಗೂ ಯುವತಿಯರಿಗೆ ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಲ್ಲಿ (ಸಿಪೆಟ್) ಉಚಿತ ಊಟ ಹಾಗೂ ವಸತಿಯೊಂದಿಗೆ ಪ್ಲಾಸ್ಟಿಕ್ ತಂತ್ರಜ್ಞಾನದ ಕುರಿತು 3 ತಿಂಗಳ ವಿವಿಧ ರೀತಿಯ ವೃತ್ತಿಪರ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಅವಧಿಯಲ್ಲಿ ಮಾಸಿಕ 2000 ರೂ. ಶಿಷ್ಯವೇತನ ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಸಂಪೂರ್ಣ ವಿವರಗಳೊಂದಿಗೆ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಹೆಬ್ಬಾಳ ಇಂಡಸ್ಟ್ರಿಯಲ್ ಏರಿಯಾ, ಮೈಸೂರು ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9380756024, 9066648466, 9845873498, ದೂ.ಸಂಖ್ಯೆ: 0821-2510619 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.