ಮೀನುಗಾರಿಕೆಗೆ ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ, ಫೆ.21: ಮೀನುಗಾರಿಕೆ ಕೆಲಸಕ್ಕೆಂದು ಮಲ್ಪೆಗೆ ತೆರಳಿದ ಜಿಲ್ಲೆಯ ಆವರ್ಸೆ ಗ್ರಾಮದ ನಿವಾಸಿ ಹರೀಶ (38) ಎಂಬ ವ್ಯಕ್ತಿಯು ಫೆಬ್ರವರಿ 10 ರಿಂದ ನಾಪತ್ತೆಯಾಗಿರುತ್ತಾರೆ.

5.5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.