ಉಡುಪಿ: ಜಿಲ್ಲೆಯಲ್ಲಿ ಹೊಸದಾಗಿ ಪೌರ ರಕ್ಷಣಾ ದಳವನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಮುಖ್ಯ ವಾರ್ಡನ್ ಪೌರ ರಕ್ಷಣೆ ಗೌರವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಗೃಹ ರಕ್ಷಕ ದಳದ ಮಹಾ ಸಮಾದೇಷ್ಟರಾದ ಆರಕ್ಷಕ ಮಹಾ ನಿರ್ದೇಶಕರ ಪ್ರಕಟಣೆ ತಿಳಿಸಿದೆ.