ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ: ಜಿಲ್ಲಾಧಿಕಾರಿ

ಉಡುಪಿ, ಫೆ.25: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾರ್ಚ್ 2 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.