ವಸತಿ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಮನೆ ನಿರ್ಮಿಸಲು ವಾಜಪೇಯಿ ನಗರ ವಸತಿ ಯೋಜನೆಯಡಿ 76 ಫಲಾನುಭವಿಗಳಿಗೆ 1,20,000 ರೂ. ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ 24 ಫಲಾನುಭವಿಗಳಿಗೆ 2 ಲಕ್ಷ ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಸೌಲಭ್ಯ ಪಡೆಯಲು, ಸ್ವಂತ ನಿವೇಶನ ಹೊಂದಿರುವ ಮಹಿಳೆ, ವಿಧುರ, ಅಂಗವಿಕಲ ಹಾಗೂ ಹಿರಿಯ ನಾಗರೀಕರು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 28 ರ ಒಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.