ಉಡುಪಿ, ಫೆ.28: ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಬ್ರಹ್ಮಾವರ ತಾಲೂಕು ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಿರ್ಮಿಸಲಾದ ವಿನೂತನ ಮಾದರಿಯ ಸಂಗೀತ ಕಾರಂಜಿ ಹಾಗೂ ವೀಕ್ಷಣಾ ಗ್ಯಾಲರಿಯ ಉದ್ಘಾಟನಾ ಸಮಾರಂಭವು ಮಾರ್ಚ್ 1 ರಂದು ಸಂಜೆ 6 ಗಂಟೆಗೆ ಕೋಟ ಡಾ. ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹಾಗೂ ವೀಕ್ಷಣಾ ಗ್ಯಾಲರಿಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.