ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ‘ಸೇವಾ ಭೂಷಣ ಪ್ರಶಸ್ತಿ’ ಅನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ಮಟ್ಟಿ ಲಕ್ಷ್ಮೀನಾರಾಯಣ ರಾವ್ ಅವರಿಗೆ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಶ್ರೀಪಾದರು ನಗರದ ಪೇಜಾವರ ಮಠದ ರಾಮವಿಠಲ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು.
ಧರ್ಮದರ್ಶಿ ಹರಿಕೃಷ್ಣ ಪುನರೂರು ಅತಿಥಿಯಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು.
ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ, ಎಸ್. ವಿ. ಭಟ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಜಂಟಿ ಕಾರ್ಯದರ್ಶಿ ಎಚ್. ಎನ್. ಶೃಂಗೇಶ್ವರ ವಂದಿಸಿದರು.
ಇದೇ ಸಂದರ್ಭದಲ್ಲಿ ಯಕ್ಷಗಾನ ಕೇಂದ್ರದ ಗುರು ಬಗ್ವಾಡಿ ಕೃಷ್ಣಮೂರ್ತಿ ಭಟ್ ಅವರ ಪತ್ನಿಯ ವೈದ್ಯಕೀಯ ಚಿಕಿತ್ಸೆಗೆ ಕಲಾರಂಗದ ವತಿಯಿಂದ ಒಂದು ಲಕ್ಷ ರೂಪಾಯಿಯನ್ನು ನೀಡಲಾಯಿತು.












