ಕುಂದಾಪುರ: ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕುಂದಾಪುರ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ವಲಸೆ ಕೂಲಿ ಕಾರ್ಮಿಕ ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುರೇಬಾನ ಗ್ರಾಮದ 32 ವರ್ಷದ ಶಿವಪ್ಪ ಎಂದು ಗುರುತಿಸಲಾಗಿದೆ. ಇವರು ಸಂಜೆ 7.45 ರ ಸುಮಾರಿಗೆ ಬಲ ಬದಿಯ ಸರ್ವೀಸ್ ರಸ್ತೆಯಿಂದ ಎಡ ಬದಿಯ ಸರ್ವಿಸ್ ರಸ್ತೆಗೆ ಬರಲು ಹೆದ್ದಾರಿ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಶಿವಪ್ಪ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












