ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ.7 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.