ಹಿರಿಯಡ್ಕ: ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರು ಜಂಟಿಯಾಗಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಹಿರಿಯಡಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ವಠಾರದ ಶ್ರೀಮತಿ ಪದ್ಮಾವತಿ ಪಿ. ಶೆಟ್ಟಿ ಗುಮ್ಮೆ ವೇದಿಕೆಯಲ್ಲಿ ತಾಲೂಕು ಮಟ್ಟದ “ಭಜನಾಮೃತ – 2022” ಕಾರ್ಯಕ್ರಮ ಮಾರ್ಚ್ 6ರಂದು ಆದಿತ್ಯವಾರ ಬೆಳಿಗ್ಗೆ 8.00 ರಿಂದ ನಡೆಯಲಿದೆ.