ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ, ಜಿಲ್ಲಾ ಮಹಿಳಾ ಮೋರ್ಚಾ ಇವರ ನೇತೃತ್ವದಲ್ಲಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನುರಿತ ಸ್ತ್ರೀ ರೋಗ ತಜ್ಞ ವೈದ್ಯರಿಂದ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವು ಮಾ.8ರಂದು ಮಂಗಳವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00 ರ ವರೆಗೆ ಕಡಿಯಾಳಿ ಉಡುಪಿ ಜಿಲ್ಲಾ ಬಿ.ಜೆ.ಪಿ ಕಚೇರಿಯಲ್ಲಿ ನಡೆಯಲಿದೆ.
ಸಾರ್ವಜನಿಕರ ಬಂಧುಗಳು, ಪಕ್ಷದ ಪ್ರಮುಖರು, ವಿವಿಧ ಸ್ತರದ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ.ಎಸ್. ಶೆಟ್ಟಿ ಅವರು ಪ್ರಕಟಣೆ ತಿಳಿಸಿದ್ದಾರೆ.












