ಕೊರಂಗ್ರಪಾಡಿಯಲ್ಲಿ ವಿಷ ಸೇವಿಸಿ ವೃದ್ಧೆ ಆತ್ಮಹತ್ಯೆ

ವಿಷ ಪದಾರ್ಥ ಸೇವಿಸಿ ವೃದ್ದೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಕೊರಂಗ್ರಪಾಡಿ ಗ್ರಾಮದಲ್ಲಿ ನಡೆದಿದೆ.

ಕೊರಂಗ್ರಪಾಡಿ ಗ್ರಾಮದ ನಿವಾಸಿ 76 ವರ್ಷದ ಕಮಲಾ ಡಿ. ಶೆಣೈ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಕಳೆದ ಒಂದು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.

ಮಾ.3 ರಂದು ಬೆಳಿಗ್ಗೆ 9:30ರ ಸುಮಾರಿಗೆ  ಕಮಲಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು‌. ಅಲ್ಲಿ ಪರೀಕ್ಷಿಸಿದ ವೈದ್ಯರು ಯಾವುದೋ ವಿಷ ಪದಾರ್ಥ ಸೇವಿಸಿರುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಮಲಾ ಅವರು ಚಿಕಿತ್ಸೆ ಫಲಿಸದೆ ಮಾ.6 ರಂದು ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.