ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ.
3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ.
ಒಟ್ಟು 8,73,846 ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. ಹಾಗೂ ಪರೀಕ್ಷೆಯಲ್ಲಿ 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ.
ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಸಮವಸ್ತ್ರ ಕಡ್ಡಾಯ:
ಮಾ.28 ರಿಂದ 11ರ ವರೆಗೆ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಶಿಕ್ಷಣ ಇಲಾಖೆ ಖಡಕ್ ಆದೇಶದಲ್ಲಿ ತಿಳಿಸಿದೆ.
ಈಗಾಗಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.
ಎಸ್ ಎಂ ಎಸ್ ಹಾಗೂ ವಾಟ್ಸಾಪ್ ಸಂದೇಶ:
ಎಸ್ ಎಸ್‌ಎಲ್ ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕೊಠಡಿಯ ಮಾಹಿತಿಯನ್ನು ಮುಂಚಿತವಾಗಿ ಎಸ್‌ಎಂಎಸ್ ಮೂಲಕ ತಿಳಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಗುಂಪುಗೂಡುವುದನ್ನು ತಡೆಯುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವ ಸಲುವಾಗಿ ಮುಂಚಿತವಾಗಿ ವಿದ್ಯಾರ್ಥಿಗಳ ಪಾಲಕರ ಮೊಬೈಲ್ ಫೋನ್ ಗಳಿಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಯಪ್ ಮೂಲಕ ಮಾಹಿತಿ ಕಳುಹಿಸಲಾಗುತ್ತದೆ. ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೋಲೀಸ್ ಬಿಗಿ ಬಂದೊಬಸ್ತ್ ಮಾಡಲಾಗಿದ್ದು ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.