ಏ.1 ರಂದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನೇರ ಪ್ರಸಾರ

ಉಡುಪಿ: ಕೇಂದ್ರ ಸರ್ಕಾರದ ಸನ್ಮಾನ್ಯ ಪ್ರಧಾನ ಮಂತ್ರಿಯವರು ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಟಾಟೋಲಾ ಸ್ಟೇಡಿಯಂನಲ್ಲಿ ಪರೀಕ್ಷಾ ಪೇ ಚರ್ಚಾ 2022 ರ ( Pariksha Pe Charcha 2022) 5ನೇ ಆವೃತ್ತಿ ಕಾರ್ಯಕ್ರಮದ ಮುಖಾಂತರ ವಿದ್ಯಾರ್ಥಿಗಳು ಮುಂಬರುವ ಪರೀಕ್ಷಾ ಸಂದರ್ಭದಲ್ಲಿ ಎದುರಿಸುವ ಒತ್ತಡ ನಿವಾರಣೆ ಹಾಗೂ ಪರೀಕ್ಷೆಗಳನ್ನು ಯಾವುದೇ ಆತಂಕವಿಲ್ಲದೇ ಆತ್ಮವಿಶ್ವಾಸದಿಂದ ಎದುರಿಸುವ ಕುರಿತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಪ್ರಧಾನ ಮಂತ್ರಿಯವರ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಅವರು ಪರೀಕ್ಷಾ ಭಯವನ್ನು ಹೇಗೆ ಎದುರಿಸಬೇಕು ಎನ್ನುವುದರ ಬಗ್ಗೆ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಡಿಡಿ ನ್ಯಾಷನಲ್, ಡಿಡಿ ನ್ಯೂಸ್, ಡಿಡಿ ಭಾರತಿಗಳಲ್ಲಿ ನೇರ ಪ್ರಸಾರವಾಗುತ್ತಿದ್ದು, ರೇಡಿಯೋ ಚಾನಲ್‌ಗಳು, ಟಿವಿ ಚಾನಲ್‌ಗಳು, ಡಿಜಿಟಲ್ ಮಾಧ್ಯಮ YouTube ಚಾನಲ್‌ಗಳು ಸೇರಿದಂತೆ EduMinofIndia, narendramodi, pmoindia, pibindia, Doordarshan National, MyGovIndia, DDNews, Rajyasabha TV, Swayam Prabha  ಗಳಲ್ಲಿ ಪ್ರಸಾರವಾಗಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.