ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 15 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksb.gov.in ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.