ಪರೀಕ್ಷಾ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ಟ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ & ಸಿಬಿಎನ್) ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಮುಕ್ತ ಪರೀಕ್ಷಾ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಕುರಿತು ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  https://ssc.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080- 25502520, 9483862020 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.