ಉಡುಪಿ: ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ಸಮಸ್ತ ಸಜ್ಜನರ ದುಃಖ, ದುರಿತಗಳನ್ನು ಪರಿಹಾರ ಮಾಡುವ ಶಕ್ತಿ ದೇವತೆ ಎಂದು ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ಸ್ವಾಮೀಜಿ ಹೇಳಿದರು.
ಕನ್ನರ್ಪಾಡಿ ಶ್ರೀ ಜಯದುರ್ಗಾ ಪರಮೇಶ್ವರೀ ದೇಗುಲದ ಬ್ರಹ್ಮಕುಂಭಾಭಿಷೇಕದ ಪ್ರಯುಕ್ತ ದೇಗುಲದ ಶ್ರೀ ಜಯದುರ್ಗಾ ಮಂಟಪದಲ್ಲಿ ಬುಧವಾರ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.
ಜೀವನದಲ್ಲಿ ಆಧ್ಯಾತ್ಮಿಕತೆ ಅಳವಡಿಸಿಕೊಂಡಲ್ಲಿ ನೆಮ್ಮದಿ ಸಾಧಿಸಲು ಸಾಧ್ಯ. ಆಧ್ಯಾತ್ಮಿಕತೆಯ ಚಿಂತನೆ ಬಹಳಷ್ಟು ಆಗಬೇಕಿದೆ. ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ಕ್ಷೇತ್ರವು ಕೋವಿಡ್ ಸಂದರ್ಭದಲ್ಲಿಯೂ ಬಡವರ ಹಸಿವನ್ನು ನೀಗಿಸಿದ ಕ್ಷೇತ್ರ. ಈ ಪುಣ್ಯ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಕಾಣುವಂತಾಗಲಿ ಎಂದು ಹಾರೈಸಿದರು.
ಶಾಸಕ ರಘುಪತಿ ಭಟ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಅಪ್ಪಣ್ಣ ಹೆಗಡೆ ಬಸ್ರೂರು, ಉಜ್ವಲ್ ಡೆವಲಪರ್ಸ್ ನ ಪುರುಷೋತ್ತಮ ಶೆಟ್ಟಿ, ಇಂದ್ರಾಳಿ ಪಂಚದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮತ್ಸ್ಯೋದ್ಯಮಿ ಆನಂದ ಪಿ ಸುವರ್ಣ, ಸಾಯಿರಾಧ ಗ್ರೂಪ್ ನ ಮನೋಹರ ಶೆಟ್ಟಿ, ಧರ್ಮಗುರು ಚಾಲ್ಸ್ ಮೆನೆಜಸ್, ಸುರೇಂದ್ರ, ಉದ್ಯಮಿ ವಾಸು ಎಸ್. ಪೂಜಾರಿ, ಸುರೇಶ್ ಶೆಟ್ಟಿ, ಕರ್ನಾಟಕ ಬ್ಯಾಂಕ್ ವಸಂತ, ಸುರೇಶ್ ರಾವ್, ನಾಗೇಶ್ ಹೆಗ್ಡೆ, ಕೋಶಾಧಿಕಾರಿ ಕೃಷ್ಣಮೂರ್ತಿ ಆಚಾರ್ಯ
ಕಿನ್ನಿಮೂಲ್ಕಿ, ನಿರುಪಮಾ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಜೀರ್ಣೋದ್ಧಾಾರ ಸಮಿತಿ ಅಧ್ಯಕ್ಷ ಎನ್. ಮುರಳೀಧರ ಬಲ್ಲಾಳ್ ಸ್ವಾಗತಿಸಿದರು.