ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ – 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ತಂತ್ರಜ್ಞಾನ, ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಹಾಗೂ ಪದವಿ ಹೊಂದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3 ರಿಂದ 5 ವರ್ಷಗಳ ಅನುಭವ ಹೊಂದಿರುವ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಏಪ್ರಿಲ್ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.