ಉಡುಪಿ: ದ್ವಿತೀಯ ಪಿಯು ಪರೀಕ್ಷೆ ಇಂದಿನಿಂದಲೇ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿದರು.
ಅವರು ಗುರುವಾರ ಮಾಧ್ಯಮದವರ ಜೊತೆ ಮಾತನಾಡಿ ಹಿಜಬ್ ವಿಚಾರದಲ್ಲಿ ಬಹಳ ಗೊಂದಲ ಅಡೆತಡೆ ಸೃಷ್ಟಿಯಾಗಿದೆ. ಎಲ್ಲರೂ ಸರಕಾರದ ಸುತ್ತೋಲೆ ಸೂಚನೆ ಪಾಲಿಸಬೇಕು, ಹಿಜಾಬ್ ಗಾಗಿ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿಗಳು ಕೋರ್ಟ್ ಆದೇಶ ಧಿಕ್ಕರಿಸಿದ್ದಾರೆ. ಆದರೆ ಭವಿಷ್ಯದ ಚಿಂತನೆ ಮಾಡಿ, ನಿಯಮ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಮತ್ತೆ ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಕರೆ ನೀಡಿದ್ದಾರೆ.
ವಿದ್ಯಾರ್ಥಿಗಳಲ್ಲಿ ಯಾವುದೇ ಬೇಧಭಾವ ಇಲ್ಲ, ಇಂದು ಬೆಳಗ್ಗೆಯೂ ಹಾಲ್ ಟಿಕೆಟ್ ಪಡೆಯಬಹುದು. ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್, ಕ್ರಮ ಕೈಗೊಳ್ಳಲಿದೆ ಎಂದರು.