ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ, ಪದ್ಮವಿಭೂಷಣ ರಾಜರ್ಷಿ ಡಾll ಡಿ. ವೀರೇಂದ್ರ ಹೆಗ್ಗಡೆಯವರು ರೂ. 25 ಲಕ್ಷ ದೇಣಿಗೆ ನೀಡಿದ್ದಾರೆ.
ಸೋಮವಾರದಂದು ಸಮಗ್ರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹಾಗೂ ದೇವಸ್ಥಾನದ ಮಂಡಳಿಗೆ ದೇಣಿಗೆಯ ಚೆಕ್ ಅನ್ನು ಹೆಗ್ಗಡೆಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಗಿರೀಶ್ ಅಂಚನ್, ಸತೀಶ್ ಕುಲಾಲ್, ಚೇತನ್ ಕುಮಾರ್ ದೇವಾಡಿಗ, ಅಶ್ವಥ್ ದೇವಾಡಿಗ, ರಾಕೇಶ್ ಜೋಗಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಕಾಮತ್, ಸದಸ್ಯರಾದ ಮನೀಶ್ ಜತ್ತನ್ನ ಉಪಸ್ಥಿತರಿದ್ದರು.